MP ಸ್ನ್ಯಾಕ್ಸ್ – ತ್ರಿವಳಿ ಸಂಗಮ : 48

170
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 48

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ದಾಸ ಬುರುಡೆ
ದೌಲತ್ ಬುರುಡೆ
ಲೋಕಕ್ಕೆಲ್ಲ ಎರಡೇ ಬುರುಡೆ

* ಗಾದೆ :
ಊರು ಹೋಗು ಅನ್ನುತ್ತೆ ಕಾಡು ಬಾ ಅನ್ನುತ್ತೆ

* ರಸಪ್ರಶ್ನೆ :
ಕರ್ನಾಟಕದ ಯಾವ ಜಿಲ್ಲೆಯಲ್ಲಿ ಕಾಳಿ ನದಿ ಹರಿಯುತ್ತೆ ?

* ಉತ್ತರ :
ಒಗಟು –
ಸೂರ್ಯ – ಚಂದ್ರ
ರಸಪ್ರಶ್ನೆ –
ಉತ್ತರ ಕನ್ನಡ ಜಿಲ್ಲೆ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share