ಅಂಬೇಡ್ಕರ್ ಅವರಿಗೆ ಗೌರವ ಅರ್ಪಣೆ

16
Share

 

*ಜಿಲ್ಲಾಡಳಿತದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ 67 ನೇ ವರ್ಷದ ಪರಿ ನಿರ್ವಾಣ ದಿನದ ಪ್ರಯುಕ್ತ ಗೌರವ ಸಮರ್ಪಣೆ*

ಮೈಸೂರು,ಡಿ.6- ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮೈಸೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 67 ನೇ ವರ್ಷದ ಪರಿ ನಿರ್ವಾಣ ದಿನದ ಪ್ರಯುಕ್ತ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಪೊಲೀಸ್ ಆಯುಕ್ತರ ರಮೇಶ್ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಅರ್ಶದ್ ಉರ್ ರೆಹಮಾನ್ ಶರೀಫ್, ಮೈಸೂರು ಉಪ ವಿಭಾಗಾಧಿಕಾರಿ ರಕ್ಷೀತ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶರಾದ ರಂಗೇಗೌಡ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಂ ಡಿ ಸುದರ್ಶನ್, ಬೌದ್ಧ ಧರ್ಮದ ಬಿಕ್ಷುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಸಿದ್ದರು.


Share