ಅಂಬೇಡ್ಕರ್ ಜಯಂತಿ-ಮತದಾನ ಪ್ರತಿಜ್ಞಾವಿಧಿ ಬೋಧನೆ

Share

 

ಮತದಾನ ಪ್ರತಿಜ್ಞಾವಿಧಿ ಬೋಧನೆ ಮಾಡುವ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ

ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಬಾಬಾ ಸಾಹೇಬ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132ನೇ ಜಯಂತಿಯ ಅಂಗವಾಗಿ ಆದಿಚುಂಚನಗಿರಿ ರಸ್ತೆಯಲ್ಲಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು ನಂತರ ಸಾಮೂಹಿಕವಾಗಿ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಕಡ್ಡಾಯ ಮತದಾನದ ಅರಿವು ಮೂಡಿಸಿದರು

ಮೂಡ ಸದಸ್ಯರಾದ ಲಕ್ಷ್ಮೀದೇವಿ, ಮೃಗಾಲಯ ಪ್ರಾಧಿಕಾರ ಸದಸ್ಯರಾದ ಜ್ಯೋತಿರೇಚಣ್ಣ,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ವೆಂಕಟೇಶ್ ದಾಸ, ರವಿ ಬಸಪ್ಪ, ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಚಾಮರಾಜ ಕ್ಷೇತ್ರದ ಅಧ್ಯಕ್ಷ ಸೂರಜ್, ಇನ್ನಿತರರು ಹಾಜರಿದ್ದರು


Share