ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ- ಜಿಲ್ಲಾಧಿಕಾರಿ

Share

 

*ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ*

– *ಡಾ. ಕೆ. ವಿ ರಾಜೇಂದ್ರ*

ಮೈಸೂರು ಏಪ್ರಿಲ್ 02 ( ಕರ್ನಾಟಕ ವಾರ್ತೆ) ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು ಜಿಲ್ಲೆಯಲ್ಲಿ ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಬಕಾರಿ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಚ್ ಡಿ ಕೋಟೆ, ಸರಗೂರು ಗುಡ್ಡಗಾಡು ಪ್ರದೇಶದಲ್ಲಿ ಕಳಭಟ್ಟಿ ಪ್ರಕರಣಗಳು ಕಂಡುಬಂದರೆ ಕೂಡಲೇ ಕಾನೂನು ರೀತಿ ಕ್ರಮಕೈಗೊಳ್ಳಬೇಕು.
ಪ್ರತಿದಿನ ಲಿಕ್ಕರ್ ಶಾಪ್ ಗಳಿಗೆ ಭೇಟಿ ನೀಡಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಆಮಿಷವೊಡ್ಡಲು ಲಿಕ್ಕರ್ ಶಾಪ್ ಗಳಲ್ಲಿ ಹಾಗೂ ಬಾರ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಜನರಿಗೆ ಲಿಕ್ಕರ್ ಹಾಗೂ ನೀಡಿ ಬೇರೆಯವರು ದುಡ್ಡು ಪಾವತಿ ಮಾಡುವ ಬಗ್ಗೆ ಗಮನಹರಿಸಿ. ಈ ಬಗ್ಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಮಾಲೀಕರಿಗೆ ಸೂಚಿಸಬೇಕು ಎಂದು ಅವರು ತಿಳಿಸಿದರು.

ಬಾರ್ ಗಳಿಂದ ಮನೆಗಳಿಗೆ ಬಲ್ಕ್ ಆಗಿ ಲಿಕ್ಕರ್ ಸರಬರಾಜು ಮಾಡುವ ಬಗ್ಗೆ ಗಮನಹರಿಸಿ. ಹಳ್ಳಿಗಳ ಕಿರಾಣಿ ಅಂಗಡಿಗಳು ಹಾಗೂ ಮನೆಗಳಲ್ಲಿ ಮದ್ಯ ಮಾರಾಟದ ಕುರಿತು ಪರಿಶೀಲಿಸಿ, ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ. ಲಿಕ್ಕರ್ ಅಂಗಡಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅಬಕಾರಿ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆ ಮಾಡಬೇಕು.
ಮತದಾನ ಮುಂಚೆ 48 ಗಂಟೆಗಳ ಒಣ ದಿನಗಳಲ್ಲಿ ಲಿಕ್ಕರ್ ನಿಷೇಧವಾಗುವ ಸಂಬಂಧ ಆ ದಿನಗಳಲ್ಲಿ ಅಬಕಾರಿ ಇಲಾಖೆ ಅಗತ್ಯ ಕ್ರಮ ವಹಿಸಬೇಕು ಎಂದರು.

ವಾಣಿಜ್ಯ ತೆರಿಗೆ ಇಲಾಖೆ
ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ತಮ್ಮ ಇಲಾಖೆಯವತಿಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕೇರಳದಿಂದ ಬರುವ ಕಮರ್ಷಿಯಲ್ ವಾಹನಗಳ ಪರಿಶೀಲನೆ ಮಾಡಬೇಕು. ಅಂತರಾಜ್ಯ ಗಡಿ ಭಾಗದ ಚೆಕ್‍ಪೋಸ್ಟ್ ಸೇರಿದಂತೆ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ವಾಣಿಜ್ಯ ತೆರಿಗೆಗಳ ಇಲಾಖೆಯವರು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜನರಿಗೆ ಆಮಿಷವೊಡ್ಡಲು ಹಲವು ಬಗೆಯಲ್ಲಿ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿರುತ್ತವೆ. ಹೆಚ್ಚಿನ ಮೊತ್ತದ ನಗದು ಹಣ, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಮತ್ತಿತರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ, ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಸಾಮಗ್ರಿಗಳ ಸಾಗಣೆ ಬಗ್ಗೆ ಸಂಶಯ ಬಂದಲ್ಲಿ ಸಮಗ್ರವಾಗಿ ತಪಾಸಣೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಕೂಡಲೆ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಚೆಕ್‍ಪೋಸ್ಟ್‍ಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವುದರಿಂದ, ಸರದಿ ಆಧಾರದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಂಬಂಧಪಟ್ಟ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರವಿಶಂಕರ್, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಕಂಬಣ್ಣ ಹಾಗೂ ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಧಿತರಿದ್ದರು.


Share