ಅಮಾವಾಸ್ಯೆ ಹಾಗೂ ಗೌರಿ ಹಬ್ಬ: ಉತ್ತನಹಳ್ಳಿ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ದೇಗುಲಕ್ಕೆ ಭಕ್ತರ ಪ್ರವೇಶ ನಿಷಿದ್ಧ.

Share

ಅಮಾವಾಸ್ಯೆ ಹಾಗೂ ಗೌರಿ ಹಬ್ಬಗಳಂದು ಉತ್ತನಹಳ್ಳಿ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ದೇಗುಲಕ್ಕೆ ಭಕ್ತರ ಪ್ರವೇಶ ನಿಷಿದ್ಧ
ಮೈಸೂರು, ಉತ್ತನಹಳ್ಳಿ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನಕ್ಕೆ ಅಮಾವಾಸ್ಯೆ ಹಾಗೂ ಗೌರಿ-ಗಣೇಶ ಹಬ್ಬಗಳಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 19 ಹಾಗೂ ಆಗಸ್ಟ್ 21 ರಂದು ಭಕ್ತಾದಿಗಳಿಗೆ ದೇವರ ದರ್ಶನ ನಿರ್ಬಂಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಅಲ್ಲದೆ ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಅಥವಾ ದಾನಿಗಳಿಂದ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share