ಅ 8 ರ೦ದು ಭೂಮಿ ಮಾರಾಟಕ್ಕಿಲ್ಲ ಚಳುವಳಿ, ನಾಮಫಲಕ ಅನಾವರಣ.

405
Share

ಮೈಸೂರು ,ಆಗಸ್ಟ್ 8 ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಡನೆ ಗಾಂಧೀಜಿಯವರು ಕ್ವಿಟ್ ಇಂಡಿಯಾ ಚಳುವಳಿ ಗೆ ಚಾಲನೆ ನೀಡಿದ ದಿನವಾಗಿದ್ದು ಆ ದಿನದಂದು ಕರ್ನಾಟಕ ರಾಜ್ಯ ರೈತ ಸಂಘವು ಹಳ್ಳಿಗಳಲ್ಲಿ ಭೂಮಿ ಮಾರಾಟಕ್ಕಿಲ್ಲ, ಕಾರ್ಪೊರೇಟ್ ಕಂಪನಿ ಮತ್ತು ಬಂಡವಾಳಶಾಹಿಗಳಿಗೆ ಪ್ರವೇಶವಿಲ್ಲ ಎಂಬ ಉದ್ದೇಶದಿಂದ ಕೂಡಿದ ನಾಮಫಲಕವನ್ನು ಗ್ರಾಮದ ಮುಂದೆ ಹಾಕಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿನಲ್ಲಿ ಧರಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ರೈತರ ಹಕ್ಕುಗಳನ್ನು ಪ್ರಭುತ್ವವು ಮಾಡುತ್ತಿರುವುದನ್ನು ವಿರೋಧಿಸಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ’ ದಿನದಂದು ಬೆಂಗಳೂರಿನ ಆನಂದರಾವ್ ಸರ್ಕಲ್ ಗಾಂಧಿ ಪ್ರತಿಮೆ ಮುಂದೆ 100 ಜನರಿಂದ ಎರಡು ಗಂಟೆಗಳ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.


Share