ಆಶಾ ಕಾರ್ಯಕರ್ತೆಯರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12000 ಗೌರವಧನ ಖಾತರಿಪಡಿಸಬೇಕು ಮತ್ತು ಸೋಂಕಿನ ವಿರುದ್ಧ ಹೋರಾಡುವ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಇಂದು ಬೆಳಗ್ಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಆಶಾ ಕಾರ್ಯಕರ್ತೆಯರು ಕಳೆದ 20ದಿನಗಳಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದು ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಗಿದೆ.