ನಾಳೆ ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರೋತ್ಸಾಹ ಧನ ವಿತರಣೆ

Share

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮೈಸೂರು,ಮೇ.14 ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೇ 15 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ನಗರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಕಲಾ ಮಂದಿರದಲ್ಲಿ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಜ್ಯದ ಆಶಾ ಕಾರ್ತಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಚವನ್‍ಪ್ರಾಷ್ ಮತ್ತು ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು.
ಬಳಿಕ ಮಧ್ಯಾಹ್ನ 2.30 ಗಂಟೆಗೆ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್‍ನಲ್ಲಿ ಜೂನ್ 5 ರಂದು ಇರುವ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಮೈಸೂರು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡುವರು.


Share