ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ.

Share

ಮೈಸೂರು ಮನೀಶ ವಾಲ್ಮೀಕಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಹಾಗೂ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಕಾರ್ಯಕರ್ತರು ಇಂದು ಬೆಳಗ್ಗೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
ಉತ್ತರಪ್ರದೇಶದಲ್ಲಿ ಮನಿಷಾ ವಾಲ್ಮೀಕಿ ಎಂಬ ದಲಿತ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಿಗೆ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಆದಿನಾಥ ನೇತೃತ್ವದ ಬಿಜೆಪಿ ಸರ್ಕಾರ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ನೀಡಿದ ಮನವಿಯಲ್ಲಿ ತಿಳಿಸಲಾಗಿದೆ. ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೆ ನೀಡಿರುವ ವರದಿಯನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.


Share