ಉದ್ಯೋಗ ಖಾತರಿ ಯೋಜನೆ ವಿಸ್ತಾರಕ್ಕೆ ಸಚಿವ ಸೋಮಶೇಖರ್ ಸೂಚನೆ

ಉದ್ಯೋಗ ಖಾತರಿ ಯೋಜನೆ ಹೆಚ್ಚು ಜನರಿಗೆ ತಲುಪಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.
ಸುರೇಶ್ ಕುಮಾರ್ ಸೂಚನೆ

ಚಾಮರಾಜನಗರ, ಮೇ 15 (ಕರ್ನಾಟಕ ವಾರ್ತೆ):- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪ್ರಸ್ತುತ ಇನ್ನಷ್ಟು ವಿಸ್ತಾರಗೊಳಿಸಿ ಹೆಚ್ಚು ಜನರಿಗೆ ಉದ್ಯೋಗ ದೊರಕಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಅವರು ಸೂಚನೆ ನೀಡಿದರು.

ಕೊಳ್ಳೇಗಾಲ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಮುಂಜಾಗ್ರತಾ ಕ್ರಮಗಳು ಹಾಗೂ ಲಾಕ್‍ಡೌನ್ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಇಂದು ಭೇಟಿ ನಿಡಿ ಪರಿಶೀಲಿಸಲಾಗಿದೆ. ಬಹುತೇಕ ಕಡೆ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಲಾಗುತ್ತಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಬಡಜನರಿಗೆ ಉದ್ಯೋಗ ಅವಕಾಶ ಒದಗಿಸುತ್ತಿರುವ ಉದ್ಯೋಗ ಖಾತರಿ ಯೋಜನೆ ಬಹಳ ಪ್ರಯೋಜನಕಾರಿಯಾಗಿದೆ. ಹೀಗಾಗಿ ಇನ್ನಷ್ಟು ಯೋಜನೆ ಕಾರ್ಯಕ್ರಮಗಳನ್ನು ವಿಸ್ತಾರಗೊಳಿಸಿ ಹೆಚ್ಚು ಗ್ರಾಮೀಣ ಜನರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಬೇಕೆಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಬಾರದ ಹಾಗೆ ಮುಂಜಾಗ್ರತಾ ಕ್ರವiಗಳನ್ನು ಕೈಗೊಳ್ಳಬೇಕು. ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಳೆ ನಂತರ ಉದ್ಭವಿಸಬಹುದಾದ ಸಮಸ್ಯೆಗಳ ಬಗ್ಗೆಯೂ ಅರಿವಿರಬೇಕು. ಮುಂದೆ ಒದಗಬಹುದಾದ ಯಾವುಧೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಬೀಳಬಹುದಾದ ಕ್ರಮಗಳಿಗೆ ಈಗಲೇ ಸಿದ್ದತೆ ಮಾಡಿಕೊಳ್ಳಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು.

ರೈತರ, ಬೆಳೆಗಾರರ ಕೃಷಿ ತೋಟಗಾರಿಕೆ ಚಟುವಟಿಕೆಗಳಿಗೆ ಪೂರಕವಿರುವ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕಾರ್ಮಿಕರು ಇತರೆ ವರ್ಗದ ಎಲ್ಲಾ ಜನರಿಗೆ ಅಗತ್ಯವಾದ ನೆರವು ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳಿಗೆ ಆದ್ಯತೆ ನೀಡಬೇಕು. ಜಿಲ್ಲೆಯೂ ಕೊರೊನಾ ಮುಕ್ತವಾಗಿ ಮುಂದುವರೆದಿದೆ. ಇದಕ್ಕೆ ಜಿಲ್ಲೆಯ ಎಲ್ಲ ಜನತೆ, ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ, ಶ್ರಮ ಕಾರಣವಾಗಿದೆ. ಎಚ್ಚರಿಕೆಯಿಂದಲೇ ಇದ್ದು ಜಿಲ್ಲೆಯ ಹೆಗ್ಗಳಿಕೆಯನ್ನು ಉಳಿಸಿಕೊಳ್ಳಬೇಕಿದೆ ಎಂದು ಸಚಿವರಾದ ಸುರೇಶ್‍ಕುಮಾರ್ ತಿಳಿಸಿದರು.

ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆ ಜನರಿಗೆ ಒಳ್ಳೆಯ ಯೋಜನೆಯಾಗಿದೆ. ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಹಣ ಪಾವತಿ ವಿಳಂಬವಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅಸಕ್ತಿ ವಹಿಸಿದರೇ ಹೆಚ್ಚಿನ ಸಾಧನೆಯಾಗಿ ಗ್ರಾಮೀಣರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಪ್ರಧಾನಮಂತ್ರಿಯವರು ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ಅನುಷ್ಠಾನವಾಗುವ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕೆಲಸ ಮಾಡಬೇಕಾಗುತ್ತದೆ. ನೊಂದಾಯಿಸದೇ ಇರುವವ ಕಟ್ಟಡ ಕಾರ್ಮಿಕರನ್ನು ನೊಂದಣಿ ಮಾಡಿ ಸರ್ಕಾರದ ನೆರವು ಪಡೆಯಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದರು.
ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆ ಹೆಚ್ಚು ಜನರಿಗೆ ತಲುಪುವಂತಾಗಲು ಪ್ರಸಕ್ತ ಸಂದರ್ಭದಲ್ಲಿ ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಒದಗಿಸಬೇಕಿದೆ. ಜಿಲ್ಲೆಯಲ್ಲಿ ಇತರೆ ವಹಿವಾಟುದಾರರಿಗೂ ಯಾವುದೇ ತೊಂದರೆ ಬಾರದ ಹಾಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾರ್ಮಿಕರು, ಇತರೆ ಜನರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಯಾವುದೇ ಆತಂಕಕ್ಕೆ ಅವಕಾಶವಾಗದ ಹಾಗೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಜನರಿಗೆ ನೆರವಾಗಲು ಔಷಧಮಿತ್ರ, ಆಸರೆಯಂತಹ ವಿಶೆÉೀಷ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅನಿತಾ ಹದ್ದಣ್ಣನವರ್, ಉಪ ವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ. ರವಿ, ವಿವಿಧ ಇಲಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು