ಎಚ್ ಡಿ ಕೆ – ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ – ಸಿಎಂ ಸಿದ್ದರಾಮಯ್ಯ

 

*ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ನವೆಂಬರ್,19:
ಕುಮಾರಸ್ವಾಮಿಯವರು
ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

*ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ :*

ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.