ಎಸ್ಎಸ್ಎಲ್ಸಿ ಪರೀಕ್ಷೆ: ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ವಜಾ, ನಿಗದಿಯಂತೆ ಪರೀಕ್ಷೆ ನಡೆಯಲಿದೆ.

534
Share

ದೆಹಲಿ: ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಬೆಳಗಾಂ ಮೂಲದ ಮಹಿಳೆಯೊಬ್ಬರು ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಬೇಕೆಂದು ಅರ್ಜಿ ಹಾಕಿದ್ದರು. ಸುಪ್ರೀಂಕೋರ್ಟ್ ಬೆಂಗಳೂರು ಹೈಕೋರ್ಟಿನ ತೀರ್ಪನ್ನು ಎತ್ತಿಹಿಡಿದು ಅರ್ಜಿಯನ್ನು ವಜಾ ಮಾಡಿದೆ, ಎಂದು ಹೇಳಲಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಲಾಗಿದೆ.


Share