ಎಸ್ ಯು ಸಿಎ ಕಾರ್ಯಕರ್ತರಿಂದ ಪ್ರತಿಭಟನೆ

ಮೈಸೂರು:
ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಹಾಗೂ ರೈತರ ಕೃಷಿ ಕಾರ್ಮಿಕ ಸಂಘಟನೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟವು ಇತ್ತೀಚೆಗೆ ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಪ್ರತಿಭಟನಾಕಾರರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕೋವಿಡ್ 19 ಸಂಕಷ್ಟದ ಸಂದರ್ಭದಲ್ಲಿ ಯಾವುದೇ ಜನಾಭಿಪ್ರಾಯ ಪಡೆಯದೆ, ಚುನಾಯಿತ ವಿಧಾನಸಭೆಯಲ್ಲಿ ಚರ್ಚೆ ನಡೆಸದೆ, ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗುತ್ತಿರುವುದು ಸಂಪೂರ್ಣವಾಗಿ -ಅಪ್ರಜಾತಾಂತ್ರಿಕ ಗ್ರಾಮವಾಗಿದೆ ಎಂದು ಹೇಳಲಾಗಿದೆ.