ಏಪ್ರಿಲ್ 26 ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

64
Share

ಮೈಸೂರು :- ಏ.26 ರಂದು ನಡೆಯಲ್ಲಿರುವ ಭಾರತದ ಲೋಕಸಭಾ ಚುನಾವಣೆ ಅಂಗವಾಗಿ ಮೈಸೂರು ಭಾಗದ ಎಲ್ಲಾ ಕೈಗಾರಿಕೆಗಳು, ಅಂಗಡಿ, ವಾಣಿಜ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಚುನಾವಣಾ ಆಯೋಗ ಹಾಗೂ ಕಾರ್ಮಿಕ ಇಲಾಖೆ ನಿರ್ದೇಶಿಸಿದೆ.

ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದ ಎಲ್ಲಾ ಕೈಗಾರಿಕೆಗಳು, ಅಂಗಡಿ, ವಾಣಿಜ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳು ಏ. 26 ರಂದು ವೇತನ ಸಹಿತ ರಜೆ ಪ್ರಕಟಿಸುವುದರ ಮೂಲಕ ಆಯೋಗದ ಆದೇಶವನ್ನು ಪಾಲಿಸಬೇಕೆಂದು ಮೈಸೂರು ಕೈಗಾರಿಕೆಗಳ ಸಂಘ ಪ್ರಧಾನ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share