ಐಟಿ ಖಾತೆ ಸಚಿವರಿಗೆ ಪ್ರತಾಪ್ ಸಿಂಹ ಮನವಿ

 

ನವ ದೆಹಲಿಯಲ್ಲಿ ಇಂದು  ಸಂಸದ ಶ್ರೀ ಪ್ರತಾಪ್ ಸಿಂಹ ರವರು ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ಸಚಿವರಾದ ಶ್ರೀ. ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ರೈಲ್ವೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವು ಮನವಿಗಳನ್ನು ಸಲ್ಲಿಸಿದರು.

ಭಾರತ ಸರ್ಕಾರದ 4ಜಿ ಸ್ಯಾಚುರೇಷನ್ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳಿಗೆ ದೂರ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಹೊಸದಾದ ಟವರ್ ಗಳು ಹಾಗೂ ಅಗತ್ಯವಿರುವ ಬ್ಯಾಟರಿಗಳಿಗೆ ಅನುಮೋದನೆ ನೀಡುವಂತೆ ಒತ್ತಾಯಿಸಿದರು. ಸಂಸದರ ಮನವಿಗೆ ಸಚಿವರು ಸಕಾರಾತ್ಮಕ ಭರವಸೆಯನ್ನೂ ಕೊಟ್ಟಿದ್ದಾರೆ ಎಂದು

ಶ್ರೀ ಪ್ರತಾಪ್ ಸಿಂಹ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ