ಒಟ್ಟು ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಪ್ರಥಮ ಸ್ಥಾನ ತಲುಪಿದ ಭಾರತ

Share

ಹೊಸದಿಲ್ಲಿ: ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ.
ಭಾರತದ ಜನಸಂಖ್ಯೆಯು 1.428 ಶತಕೋಟಿಯನ್ನು ಮೀರಿದೆ, ಇದು ಚೀನಾದ 1.425 ಶತಕೋಟಿ ಜನರಿಗಿಂತ ಸ್ವಲ್ಪ ಹೆಚ್ಚಾಗಿದೆ ಎಂದು ಯುಎನ್‌ನ ವಿಶ್ವ ಜನಸಂಖ್ಯೆಯ ಅಂಕಿ ಅಂಶಗಳು ತಿಳಿಸಿವೆ.
ಅರ್ಧದಷ್ಟು ಜನಸಂಖ್ಯೆಯು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುವ ಭಾರತವು ಮುಂಬರುವ ವರ್ಷಗಳಲ್ಲಿ ವಿಶ್ವದ ಅತ್ಯಂತ ವೇಗವಾಗಿ ಆರ್ಥಿಕತೆಯು ಬೆಳೆಯಲಿದೆ.


Share