ಕಂಟೈನ್ಮೆಂಟ್ ವಲಯ: ಆಗಸ್ಟ್ 31 ರವರೆಗೆ ವಿಸ್ತರಣೆ: ಗೌರಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ, ಆದೇಶ.

Share

ಕಂಟೋನ್ಮೆಂಟ್ ವಲಯ: ಆಗಸ್ಟ್ 31 ರವರೆಗೆ ವಿಸ್ತರಣೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದನ್ವಯ ಕಂಟೈನ್‌ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲು ಹಾಗೂ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನಃ ಆರಂಭಿಸಲು ತೆರವು ಮಾರ್ಗಸೂಚಿಗಳನ್ನು ಹೊರಡಿಸಿದೆ . ಇವುಗಳು ದಿನಾಂಕ : 31.08.2020 ರವರೆಗೆ ಜಾರಿಯಲ್ಲಿರುತ್ತವೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರು ಆದ ವಿಜಯಭಾಸ್ಕರ್ ಇಂದು ಬಿಡುಗಡೆಗೊಳಿಸಿದ ಆದೇಶದಲ್ಲಿ ತಿಳಿಸಿದ್ದಾರೆ. 2 , ಅದರನ್ವಯ , ರಾಜ್ಯ ಸರ್ಕಾರವು ಕಂಟೈನ್‌ಮೆಂಟ್ ವಲಯಗಳಲ್ಲಿನ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲು ಹಾಗೂ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನಃ ಆರಂಭಿಸಲು ತೆರವು -3 ಮಾರ್ಗಸೂಚಿಗಳನ್ನು ಹೊರಡಿಸಿದೆ . ಇವುಗಳು ದಿನಾಂಕ : 31.08.2020 ರವರೆಗೆ ಜಾರಿಯಲ್ಲಿರುತ್ತವೆ . 3 , ಕೇಂದ್ರ ಸರ್ಕಾರವು ಹೊರಡಿಸಿದ ತೆರವು -3 ರ ಅವಧಿಯಲ್ಲಿನ ಅನುಮತಿಸಲಾದ ಕಾರ್ಯಚಟುವಟಿಕೆಗಳಲ್ಲಿ “ ಸಾಮಾಜಿಕ , ರಾಜಕೀಯ , ಕ್ರೀಡೆ / ಮನೋರಂಜನೆ / ಶೈಕ್ಷಣಿಕ / ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳು ” ಚಟುವಟಿಕೆಗಳಿಗೆ ಅನುಮತಿ ನೀಡಿರುವುದಿಲ್ಲ . ಅದರಂತೆ ರಾಜ್ಯ ಸರ್ಕಾರವು ದಿನಾಂಕ : 30.07.2020 ರಂದು ಹೊರಡಿಸಿದ ಮಾರ್ಗಸೂಚಿಯಲ್ಲಿ ಇವುಗಳಿಗೆ ಅನುಮತಿಯನ್ನು ನೀಡಿರುವುದಿಲ್ಲ 4. ಕೋವಿಡ್ -19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ . ಆದಾಗೂ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿವೆ . ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಂಡ್ -19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಕತ್ತರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ . 5 , ಶ್ರೀ ಗಣೇಶ ಚತುರ್ಥಿ ಹಬ್ಬವು ದಿನಾಂಕ : 22-08-2020ರಂದು ಆಚರಣೆಗೆ ಬರಲಿದೆ . ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ . ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಶ್ರೀ ಗಣೇಶೋತ್ಸವದ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿರುತ್ತದೆ . … 2 -2 6 , ಈ ಹಿನ್ನೆಲೆಯಲ್ಲಿ , ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಪದತ್ತವಾದ ಅಧಿಕಾರ ಚಲಾಯಿಸಿ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷನಾಗಿ ಈ ಕೆಳಗೆ ಸಹಿ ಮಾಡಿರುವ ನಾನು ಮುಂಬರಲಿರುವ ಶ್ರೀ ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ಈ ಆದೇಶದ “ ಅನುಬಂಧ ” ದಲ್ಲಿರುವಂತೆ ಮಾರ್ಗಸೂಚಿಗಳನ್ನು ಹೊರಡಿಸಿರುತ್ತೇನೆ . ಈ ಮಾರ್ಗಸೂಚಿಗಳು ಇಂದಿನಿಂದ ಜಾರಿಯಲ್ಲಿರುತ್ತವೆ . 7 , ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು , ಪೊಲೀಸ್ ಆಯುಕ್ತರು , ಜಿಲ್ಲೆಗಳ ಜಿಲ್ಲಾಧಿಕಾರಿಗಳು , ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರೆ ಇಲಾಖಾ ಮುಖ್ಯಸ್ಥರುಗಳು ಹಾಗೂ ಇಲಾಖಾ ಪ್ರಾಧಿಕಾರಗಳು ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು ಎಂದು ಮುಖ್ಯ ಕಾರ್ಯದರ್ಶಿಗಳು ತಮ್ಮ.ದೇಶದಲ್ಲಿ ತಿಳಿಸಿದ್ದಾರೆ.


Share