ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಇನ್ನುಳಿದೆಡೆ ಸಾರ್ವಜನಿಕ ಗ್ರಂಥಾಲಯಗಳು ಓಪನ್.

Share

*ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಇನ್ನುಳಿದೆಡೆ ಸಾರ್ವಜನಿಕ ಗ್ರಂಥಾಲಯಗಳು ಓಪನ್* 
ಮೈಸೂರು, :- ಕೋವಿಡ್-19 ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಸಾರ್ವಜನಿಕ ಗ್ರಂಥಾಲಯಗಳು ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಇನ್ನುಳಿದೆಡೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಅದರಂತೆ ರಾಜ್ಯದಲ್ಲಿನ ಎಲ್ಲಾ ಸಾರ್ವಜನಿಕ ಗ್ರಂಥಾಲಯಗಳು ಶನಿವಾರದಿಂದ ಓದುಗರಿಗೆ ಮುಕ್ತವಾಗಲಿದೆ ಎಂದು ಮೈಸೂರು ಜಿಲ್ಲಾ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿರುತ್ತಾರೆ.    
      ಮೈಸೂರು ‌‌ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ,  ವ್ಯಾಪ್ತಿಯ ಎಲ್ಲಾ ಶಾಖಾ ಗ್ರಂಥಾಲಯಗಳು, ಸೇವಾ ಕೇಂದ್ರ, ವಾಚನಾಲಯ, ಸಮುದಾಯ ಮಕ್ಕಳ ಕೇಂದ್ರಗಳು ಬೆಳಿಗ್ಗೆ 8 ರಿಂದ 11.30 ವರೆಗೆ ಮತ್ತು ಸಾಯಂಕಾಲ 4 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ. ಹಾಗೂ ಕುವೆಂಪು ಸಂಚಾರಿ ಗ್ರಂಥಾಲಯವು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ. ಗ್ರಾಮ ಪಂಚಾಯಿತಿ,ಅಲೆಮಾರಿ ಪ್ರದೇಶ, ಕೊಳಚೆ ಪ್ರದೇಶ ಗ್ರಂಥಾಲಯಗಳು ಬೆಳಿಗ್ಗೆ 9  ರಿಂದ 11 ಮತ್ತು ಸಾಯಂಕಾಲ 4 ರಿಂದ 6 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ.  
          ಸಾರ್ವಜನಿಕರು ಕೋವಿಡ್-19 ಸೋಂಕು ನಿಯಂತ್ರಿಸುವ ಸಂಬಂಧದಲ್ಲಿ ಹೊರಡಿಸಲಾಗಿರುವ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಸಾರ್ವಜನಿಕ ಓದುಗರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳತಕ್ಕದ್ದು ಹಾಗೂ ಗ್ರಂಥಾಲಯದ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುವುದು. ಒಂದು ವೇಳೆ ದೇಹದ ಉಷ್ಣಾಂಶ ಹೆಚ್ಚಿದ್ದಲ್ಲಿ ಅಂತಹವರಿಗೆ ಗ್ರಂಥಾಲಯಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ಮೈಸೂರು ನಗರ ಹಾಗೂ ಜಿಲ್ಲಾ ಗ್ರಂಥಾಲಯದ ಉಪನಿರ್ದೇಶಕರಾದ ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share