ಕಬಿನಿ ಜಲಾಶಯ: ಇಂದು 40 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ.

Share

ಮೈಸೂರು, ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಪ್ರಮಾಣ ಸತತವಾಗಿ ಏರುತ್ತಿರುವುದರಿಂದ ಕಬಿನಿ ಜಲಾಶಯದಿಂದ ಇಂದು 40.000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಪ್ರಮಾಣದ ನೀರನ್ನು ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ವಾಗಬೇಕೆಂದು ಅವರು ಮನವಿ ಮಾಡಿದ್ದಾರೆ .

ಕಳೆದ ಎರಡು ಮೂರು ದಿನಗಳಿಂದ ಕೇರಳದ ವೈನಾಡಿನಲ್ಲಿ ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಜಲಾಶಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.


Share