ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ

Share

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಆರನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿನ್ನೆಯ ದಿನ ಮಧ್ಯರಾತ್ರಿ ಎರಡು ಗಂಟೆಯಲ್ಲಿ ಸಭೆ ನಡೆಸಿ ಈ ಅಂತಿಮ ಪಟ್ಟಿ ಸಿದ್ಧಪಡಿಸಿದೆ.
ಮಂಗಳೂರು ಉತ್ತರದ ಅಭ್ಯರ್ಥಿಯನ್ನು ‌ಕೊನೆಗೂ ಘೋಷಣೆ ಮಾಡಿದ್ದು ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಇನಾಯತ್ ಅಲಿ ಅವರಿಗೆ ಟಿಕೆಟ್ ಘೋಷಿಸಿದೆ. ಇದರಿಂದ ಬೇಸತ್ತಿರುವ ಭಾವ ಪಕ್ಷೇತರರಾಗಿ ಸ್ಪರ್ಧಿಸುವ ಸಂಭವ ಇದೆ.
ರಾಯಚೂರು ನಗರಕ್ಕೆ – ಮೊಹಮ್ಮದ್ ಶಾಲಮ್, ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ, ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್, ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ ಅವರಿಗೆ ಟಿಕೆಟ್‌ ನೀಡಲಾಗಿದೆ.
ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.


Share