ಕಾಂಗ್ರೆಸ್ – ಜನರಿಗೆ ಕಾರ್ಡ್ ಗಳನ್ನು ವಿತರರಣೆ

Share

 

ಮೈಸೂರು
೦೩ ಮಾರ್ಚ್ ೨೩

ಕಾಂಗ್ರೆಸ್ ನ
200 ಯುನಿಟ್ ಉಚಿತ ವಿದ್ಯುತ್ ಮತ್ತು ಗೃಹಿಣಿ 2000 ರೂ ಗ್ಯಾರೆಂಟಿ ಯೋಜನೆ ಘೋಷಣೆ ಹಿನ್ನೆಲೆಯಲ್ಲಿ ಇಂದು ಕೆ ಆರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ನವೀನ್ ಕುಮಾರ್ ಅವರ ನೇತೃತ್ವದಲ್ಲಿ, ವಾರ್ಡ್ ನಂಬರ್ ೬೪ ಅರವಿಂದ ನಗರ ಭಾಗದಲ್ಲಿ
ಜನರಿಗೆ ಕಾರ್ಡ್ ಗಳನ್ನು ವಿತರಿಸಲಾಯಿತು,

ಕಾಂಗ್ರೆಸ್ ನಗರಾಧ್ಯಕ್ಷ ಮೂರ್ತಿ ಯವರು ಕಾರ್ಡ್ ಗಳನ್ನು ನೀಡುವ ಮೂಲಕ ಚಾಲನೆ ನೀಡಿದರು ,

ಕೆಲವು ದಿನಗಳ ಹಿಂದೆ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣಿಜಿತ್ ಸಿಂಗ್ ಸುರ್ಜೇವಾಲಾ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದರು,

ಇದೆ ಸಂಧರ್ಭದಲ್ಲಿ ಮಾತನಾಡಿದ ನವೀನ್ ಕುಮಾರ್ ಅವರು ಕಾಂಗ್ರೆಸ್ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ನೀಡಿದೆ ಮುಂಬರುವ ದಿನದಲ್ಲಿ ಕಾಂಗ್ರೆಸ್ ನ
200 ಯುನಿಟ್ ಉಚಿತ ವಿದ್ಯುತ್ ಮತ್ತು ಗೃಹಿಣಿ 2000 ರೂ ಗ್ಯಾರೆಂಟಿ ಯೋಜನೆ ಘೋಷಣೆ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್ ನ ಜನರಿಗೆ ಗ್ಯಾರಂಟಿ ಕಾರ್ಡ್ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಹಾಗೆಯೇ ನಮ್ಮ ಆಶ್ವಾಸನೆ ಯಂತೆ ಭರವಸೆಯನ್ನು ಹೀಡೇರಿಸುತ್ತೇವೆ ಎಂದರು,

ಇದೇ ಸಂದರ್ಭದಲ್ಲಿ ನಗರ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿಗಳಾದ ಗುಡ್ಡಪ್ಪ ಶಿವಣ್ಣರವರು, ಮೈಸೂರು ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುಶೀಲ ಕೇಶವಮೂರ್ತಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಲತಾ ಮೋಹನ್, 65ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಮುಖಂಡರಾದ ಮೊಗಣ್ಣಾಚಾರ್, ಕಾಂಗ್ರೆಸ್ ಮುಖಂಡರುಗಳಾದ ರಾಜೇಶ್ ಎಂ, ಪ್ರವೀಣ್ ಕುಮಾರ್, ವಿಜ್ಞೇಶ್, ಆನಂದ್, ಶ್ರೀನಿವಾಸ್, ಕುಮಾರ್, ಭರತ್, ಪ್ರಶಾಂತ್, ವಸಂತ ಸಾವಂತಿ, ಜ್ಯೋತಿ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು.


Share