ಕಾಡಾನೆ ತುಳಿತಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Share

ಆಲೂರು(ಹಾಸನ): ಕಾದಾಟದಲ್ಲಿ ಗಾಯಗೊಂಡಿದ್ದ
ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ಅರವಳಿಕೆ ಶಾರ್ಪ್ ಶೂಟರ್
ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ಆರಂಭಿಸಿದ್ದತ್ತು. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರವಳಿಕೆ ಮದ್ದು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿದೆ. ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದು, ಹಾಸನದ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ .

Share