ಮೈಸೂರು. ಕೃಷಿಗೆ ನೀರು ಹರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ
ಅವರು ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾವೇರಿ ಕಬಿನಿ ಅಣೆಕಟ್ಟಿನಿಂದ ನೀರು ಹರಿಸುವ ಬಗ್ಗೆ ಪ್ರಾಧಿಕಾರದ ಸಭೆ ನಡೆದಿದೆ ಜಲಾಶಯ ನೀರಿನ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದರು
ಮಾಜಿ ಸಚಿವ ವಿಶ್ವನಾಥ್ ಅವರಿಗೆ ಎಂಎಲ್ಸಿ ಸ್ಥಾನದ ಬಗ್ಗೆ ಪ್ರಶ್ನಿಸಿದಾಗ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿ ಜಾರಿಕೊಂಡರು