ಕೊರೋನಾ, ಚಾಮರಾಜನಗರ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ:- ಸಾರ್ವಜನಿಕರ ಮತ್ತು ಪ್ರವಾಸಿಗರ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್ – 19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರೇಕ್ಷಣೀಯ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಹಾಗೂ ಸದರಿ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಂಸ್ಟೇ, ರೆಸಾರ್ಟ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.