ಕೊರೋನಾ; ನಾಳೆ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಸಿದ್ದರಾಮಯ್ಯ.

412
Share

ಬೆಂಗಳೂರು.
ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕು ಚಿಕಿತ್ಸೆ ನಿವಾರಣೆಗೆ ರಾಜ್ಯ ಸರ್ಕಾರ ಖರೀದಿಸಿರುವ ಉಪಕರಣಗಳು ಹಾಗೂ ಇನ್ನಿತರ ಖರ್ಚಿನ ಬಗ್ಗೆ ಮುಖ್ಯಮಂತ್ರಿಗಳು ಇಲ್ಲಿಯವರೆಗೂ ಲೆಕ್ಕ ನೀಡಿಲ್ಲ ಹೀಗಾಗಿ ನಾಳೆ ತಮ್ಮ ಬಳಿ ಇರುವ ದಾಖಲೆಯನ್ನು ರಾಜ್ಯದ ಜನತೆ ಮುಂದೆ ಪ್ರಕಟಿಸುವುದಾಗಿ ವಿರೋಧಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ 12 ದಿನ ಆದರೂ ರಾಜ್ಯ ಸರ್ಕಾರ ಲೆಕ್ಕ ನೀಡಿಲ್ಲ ಚುನಾಯಿತ ಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ಲೆಕ್ಕ ನೀಡುವುದು ಸರ್ಕಾರದ ಕರ್ತವ್ಯ ಆಗಿರುತ್ತದೆ ಎಂದು ಅವರು ತಿಳಿಸಿದರು.
ಒಂದೇ ದಿನದಲ್ಲಿ ಮುಖ್ಯಮಂತ್ರಿಯವರು ಲೆಕ್ಕ ನೀಡುವುದಾಗಿ ತಿಳಿಸಿದ್ದರು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Share