ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗಿ ಕಾಣುತ್ತಿದೆ.
ನರಸಿಂಹರಾಜ ಕ್ಷೇತ್ರದ ಕೆಲವು ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಕೆಲವು ಪ್ರದೇಶಗಳನ್ನು ಲಾಕ್ ಡೌನ್ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ.
ಈ ಭಾಗದಲ್ಲಿ ಸೋಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ.
ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ.
ಅಲ್ಲಿನ ಶಾಸಕರು ಇತರ ಮುಖಂಡರೊಂದಿಗೆ ಮಾತನಾಡಿ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್, ಜಿಲ್ಲಾ ಪಂಚಾಯತಿ ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರಾ, ಉಪಸ್ಥಿತರಿದ್ದರು.