ಕೊರೋನಾ: ಮೈಸೂರು ಪಾಲಿಕೆ ಆಯುಕ್ತರ ಎಚ್ಚರಿಕೆ.

Share

ಮೈಸೂರು ಮೈಸೂರು ನಗರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯನ್ನು ವಸ್ತುಪ್ರದರ್ಶನಕ್ಕೆ ಸ್ಥಳಾಂತರಿಸಲಾಗಿದ್ದು ರೈತರಿಗೆ ಮಾತ್ರ ವಸ್ತುಪ್ರದರ್ಶನ ಆವರಣದಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ತಿಳಿಸಿದ್ದಾರೆ.

ಚಿಲ್ಲರೆ ತರಕಾರಿ ವ್ಯಾಪಾರಸ್ಥರು ಅವರವರ ಸ್ಥಳದಲ್ಲಿ ಮಾರಾಟ ಮಾಡಬೇಕು ಎಂಜಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದರೆ ಪೊಲೀಸರ ಸಹಾಯದಿಂದ ತರಕಾರಿ ಮಾರುವವನನ್ನು ತೆರವುಗೊಳಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.


Share