ಕೋರೋನ: ಉಪಕರಣ, ಖರೀದಿ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Share

ಬೆಂಗಳೂರು ರಾಜ್ಯದ ಕೊರೋನಾ ಉಪಕರಣ ಖರೀದಿಸಿರುವ ಸಂಬಂಧ, ಉಪಕರಣ ಮತ್ತು ಖರ್ಚಿನ ಬಗ್ಗೆ ನ್ಯಾಯಾಧೀಶರ ತನಿಖೆ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 4164 ಕೋಟಿ ಖರ್ಚು ಆಗಿರುವ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು. ಸುಮಾರು 2000 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿರುವ ಬಗ್ಗೆ ಅಂಕಿಅಂಶಗಳ ವಿವರವನ್ನು ನೀಡಿದರು.

ಕೊರೊನಾ ಸೋಂಕು ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪಕ್ಷ ಯಾವಾಗಲೂ ಆಡಳಿತ ಪಕ್ಷಕ್ಕೆ ಸಹಕಾರ ನೀಡಲು ಸಿದ್ಧವಿರುತ್ತದೆ ,ಆದರೆ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಪಕ್ಷ ಸಹಕಾರ ನೀಡುವುದಿಲ್ಲ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ ಕಾಂಗ್ರೆಸ್ ಪಕ್ಷಕ್ಕೆ


Share