ಕೋರೋನ, 66 ಜನರ ವರದಿ ನೆಗೆಟಿವ್

66 ಜನರ ವರದಿ ನೆಗೆಟಿವ್

ಚಾಮರಾಜನಗರ,ಜೂನ್ 1 (ಕರ್ನಾಟಕ ವಾರ್ತೆ):- ಜಿಲ್ಲೆಯಿಂದ ಭಾನುವಾರ(ಮೇ31) ಪರೀಕ್ಷೆಗಾಗಿ ಕಳುಹಿಸಲಾಗಿದ್ದ 66ಜನರ ಗಂಟಲಿನ ದ್ರವ ಮಾದರಿಯ ಪ್ರಯೋಗಾಲಯ ವರದಿಯು ನೆಗೆಟಿವ್ ಬಂದಿದೆ. ಇಂದು 43 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ.

ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಬಂದಿರುವ 27 ಜನರನ್ನು ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ವಿವಿಧ ಹಾಸ್ಟಲ್‍ಗಳಲ್ಲಿ ಇರಿಸಿ ನಿಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಯಾರನ್ನು ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.