ಗೃಹಲಕ್ಷ್ಮಿ : ಉಪ ಮುಖ್ಯಮಂತ್ರಿಗಳಿoದ ಪೂರ್ವಭಾವಿ ಸಭೆ

ಗೃಹಲಕ್ಷ್ಮಿ : ಉಪ ಮುಖ್ಯಮಂತ್ರಿಗಳಿoದ ಪೂರ್ವಭಾವಿ ಸಭೆ
ಮೈಸೂರು – ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಕುರಿತು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರ್ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ  ಹೆಬ್ಬಾಳ್ಕರ್, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಪಶು ಸಂಗೋಪನಾ ಹಾಗೂ ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ನರೇಂದ್ರಸ್ವಾಮಿ, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಡಿ ರವಿಶಂಕರ್, ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಧಿತರಿದ್ದರು.