ಚಾಮರಾಜನಗರ ಜಿಲ್ಲೆಯಲ್ಲಿ ಇಬ್ಬರ ವರದಿ ನೆಗೆಟಿವ್

ಚಾಮರಾಜನಗರ, ಮೇ 14, ಜಿಲ್ಲೆಯಲ್ಲಿ ಈ ಹಿಂದೆ ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಗಂಟಲಿನ ದ್ರವ ಮಾದರಿಗಳ ಪೈಕಿ ಇಬ್ಬರ ಪ್ರಯೋಗ ಫಲಿತಾಂಶ ವರದಿಯು ನೆಗೆಟಿವ್ ಬಂದಿದೆ.

ಇಂದು 72 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಒಟ್ಟಾರೆ 151 ಜನರ ಪ್ರಯೋಗಶಾಲಾ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಯಾರನ್ನು ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.