ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಪ್ರತಿಭಟನೆ

ಮೈಸೂರು, ಭಾರತ ದೇಶದಲ್ಲಿ ಚೀನಾ ವಸ್ತುಗಳನ್ನು ಮಾರಾಟ ಮಾಡುವುದನ್ನು ಬಹಿಷ್ಕರಿಸಬೇಕು ಎಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರಧಾನ ಮಂತ್ರಿಗಳು ಗಮನಹರಿಸಿ ,ಚೀನಾದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿ ಉತ್ಪಾದನೆಗಳನ್ನು ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸಿ ಎಂದು ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ ಇಂದು ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ನೇತೃತ್ವ ವಹಿಸಿದ್ದರು.