ಚುನಾವಣಾ ಸುದ್ಧಿ : ಒಟ್ಟು 5102 ನಾಮಪತ್ರ ಸಲ್ಲಿಕೆ

Share

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆಗೆ ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು 3,600 ಅಭ್ಯರ್ಥಿಗಳು ಒಟ್ಟು 5,102 ನಾಮಪತ್ರಗಳನ್ನು ಸಲ್ಲಿಸಲಾಗಿದ್ದು ಶುಕ್ರವಾರ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿತ್ತು. ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ.
ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.
ಒಟ್ಟು ನಾಮಪತ್ರಗಳಲ್ಲಿ 3,327 ಪುರುಷ ಅಭ್ಯರ್ಥಿಗಳಿಂದ 4,710 ಮತ್ತು 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರಗಳು ಸಲ್ಲಿಕೆಯಾಗಿವೆ. “ಇತರ ಲಿಂಗ” ಅಭ್ಯರ್ಥಿಯಿಂದ ಒಂದು ನಾಮಪತ್ರವನ್ನು ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
707 ನಾಮಪತ್ರಗಳನ್ನು ಬಿಜೆಪಿ ಎಂದು ಹೇಳಿಕೊಂಡ ಅಭ್ಯರ್ಥಿಗಳು, 651 ಕಾಂಗ್ರೆಸ್, 455 ಜೆಡಿಎಸ್ (ಎಸ್) ಮತ್ತು ಉಳಿದವರು ಇತರ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳೆಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಆಯೋಗ ತಿಳಿಸಿದೆ.
ಅಧಿಕಾರಿಗಳ ಪ್ರಕಾರ, ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಬಹುದು.
ನಾಮಪತ್ರ ಸಲ್ಲಿಕೆಗೆ ಆರನೇ ಮತ್ತು ಕೊನೆಯ ದಿನವಾದ ಗುರುವಾರ ಹಲವು ಪ್ರಮುಖ ನಾಯಕರು ಸೇರಿದಂತೆ 1,691 ಅಭ್ಯರ್ಥಿಗಳಿಂದ 1,934 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ.


Share