ಜಿಲ್ಲಾಧಿಕಾರಿಗಳಿಂದ ಯಾದಗಿರಿ ರೈಲ್ವೆ ನಿಲ್ದಾಣ ಪರಿಶೀಲನೆ

419
Share

ಮೇ 16ರಂದು ರೈಲು ಮೂಲಕ ಕಾರ್ಮಿಕರು ಆಗಮಿಸುತ್ತಿರುವ ಹಿನ್ನೆಲೆ
ರೈಲು ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ

ಯಾದಗಿರಿ, ಮೇ 14, ಮಹಾರಾಷ್ಟ್ರ ರಾಜ್ಯದ ಸಿಂಧುದುರ್ಗ ಜಿಲ್ಲೆಯಿಂದ ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲು ಮೂಲಕ ಮೇ 16ರಂದು ಯಾದಗಿರಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ನಗರದ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.

ರೈಲು ಮೂಲಕ ಬರುವ ಕಾರ್ಮಿಕರೆಲ್ಲರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ನಂತರ ಎಲ್ಲಾ ಕಾರ್ಮಿಕರನ್ನು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಇನ್‍ಸ್ಟಿಟ್ಯೂಟ್ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ಯಬೇಕು. ಅಲ್ಲಿ ಅವರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರದ ಮಾರ್ಗಸೂಚಿಗಳ ಅನ್ವಯ ಇವರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೆÇಲೀಸ್ ವರಿμÁ್ಠದಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಡಿವೈಎಸ್‍ಪಿ ಯು.ಶರಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರು ಉಪಸ್ಥಿತರಿದ್ದರು.


Share