ಜಿ, ಅರಸುಜನ್ಮ ದಿನಾಚರಣೆ, ಆಗಸ್ಟ್ 20

 

*ಅರ್ಥ ಪೂರ್ಣವಾಗಿ ದೇವರಾಜ ಅರಸು ಅವರ ಜಯಂತಿ ಆಚರಣೆ*-

*ಕವಿತಾ ರಾಜಾರಾಮ್*

ಮೈಸೂರು ಆಗಸ್ಟ್ 9 ಹಿಂದುಳಿದ ವರ್ಗಗಳ ಹರಿಕಾರ, ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ದಿ. ದೇವರಾಜ್ ಅರಸು ಅವರ ಜನ್ಮ ದಿನಾಚರಣೆ ಯನ್ನೂ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರು ತಿಳಿಸಿದರು

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದೇವರಾಜ್ ಅರಸು ಅವರ 108 ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ನಗರದ ಕಲಾ ಮಂದಿರದಲ್ಲಿ ಆಯೋಜಿಸಲಾಗುವು ಮೇ ಮಾಡಬೇಡಿ,ಬೂಇದು. ಎಲ್ಲಾ ಸಮುದಾಯದವರು ಸೇರಿ ದೇವರಾಜ ಅರಸು ಅವರ ಜಯತಿಯನ್ನು ಆಚರಣೆ ಮಾಡೋಣ. 2022-23 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿಲಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು. ಇದರಿಂದ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಒಬ್ಬರು ಸಂಪನ್ಮೂಲ ವ್ಯಕ್ತಿಯಿಂದ ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ಕೊಡಿಸಲಾಗುವುದು. ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿಯೂ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಮುದಾಯದ ಮುಖಂಡರು ಮಾತನಾಡಿ ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಅರಸು ಅವರ ಕುರಿತು ಪಿ ಹೆಚ್ ಡಿ ಮಾಡಿರುವವರನ್ನು ಗುರುತಿಸಿ ಗೌರವಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿಂದುಳಿದ ವರ್ಗದವರನ್ನು ಗುರುತಿಸಿ ದೇವರಾಜ್ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ರಾಘವೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳಾದ ಡಾ. ಕುಮಾರ್ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುದರ್ಶನ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಧಿತರಿದ್ದರು.