ಡಿಸೆಂಬರ್ 09 ರಂದು ರಾಷ್ಟ್ರೀಯ ಲೋಕ ಅದಾಲತ್

 

ಡಿಸೆಂಬರ್ 09 ರಂದು ರಾಷ್ಟ್ರೀಯ ಲೋಕ ಅದಾಲತ್*
ಮೈಸೂರು,ನ.- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿಸೆಂಬರ್ 09 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸದರಿ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದ್ದಲ್ಲಿ ಮುಂಚಿತವಾಗಿ ಸಂಬoಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ/ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಲೋಕ್ ಅದಾಲತ್ ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗು ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬoಧಿಸಿದ ಸೇವಾ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬoಧಿತ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು (ವಿಚ್ಛೇದನೆಯನ್ನು ಹೊರತುಪಡಿಸಿ) ರಾಜಿಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ:1800-425-0131 ಅಥವಾ  www.kslsa.kar.nic.in    ವೆಬ್‌ಸೈಟ್ ಅನ್ನು, ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರುಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.