ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ಯುವ ಸಮುದಾಯ ಮುಕ್ತವಾಗುವಂತೆ ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು: ಜಿಲ್ಲಾಧಿಕಾರಿ ದೀಪಾ ಚೋಳನ್
ಧಾರವಾಡ (ಕರ್ನಾಟಕ ವಾರ್ತೆ)ಮೇ.31: ಯುವಸಮುದಾಯದ ಮೇಲೆ ತಂಬಾಕು ಉತ್ಪನ್ನಗಳು ಮತ್ತು ನಿಕೋಟಿನ್ ಬಳಸಿರುವ ಪದಾರ್ಥಗಳು ಗಂಭೀರವಾದ ಪರಿಣಾಮ ಉಂಟು ಮಾಡಿ, ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತವೆ. ಇದರಿಂದಾಗಿ ದೇಶದ ಅಭಿವೃದ್ಧಿ ಮೇಲೆ ನೇರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ತಂಬಾಕು ಹಾಗೂ ಇತರೇ ತಂಬಾಕು ಉತ್ಪನ್ನಗಳ ಬಳಕೆ ಮಾಡದಂತೆ ಸಮಾಜದಲ್ಲಿ ಹೆಚ್ಚು ಹೆಚ್ಚು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ರಹಿತ ದಿನಾಚರಣೆ ಕುರಿತ ಘೋಷವಾಖ್ಯ ಮುದ್ರಿತ ಮಾಸ್ಕಗಳನ್ನು ವಿತರಿಸಿ, ಮಾತನಾಡಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ,ಮ ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರಲು ಭಾರತ ಸರಕಾರವು 2003 ರಲ್ಲಿ ತಂಬಾಕು ನಿಯಂತ್ರಣ (ಕೋಟ್ಪಾ) ಕಾನೂನು ಜಾರಿಗೊಳಸಿದೆ. ಆ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ