ತೆಲಂಗಾಣ ಅಗ್ನಿ ದುರಂತ : 6 ಮಂದಿ ಸಾವು

Share

ಹೈದರಾಬಾದ್:
ಇಲ್ಲಿನ ಸಿಕಂದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣ ಒಂದರಲ್ಲಿ ಗುರುವಾರ ಸಂಜೆ ಸಂಭವಿಸಿದ ದೊಡ್ಡ ಅಗ್ನಿ ದುರಂತದಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ ಆದರೆ, ಹೆಚ್ಚಾಗಿ ಹೊಗೆಯನ್ನು ಸೇವಿಸಿ ಉಸಿರಾಡಲು ಆಗದಿರುವುದು ಸಾವಿಗೆ ಕಾರಣವಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಇದೆ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿ ಹೇಳಿದರು.
ಹನ್ನೆರಡು ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ಆರು ಮಂದಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಉಳಿದವರು ಇನ್ನೂ ಚಿಕಿತ್ಸೆಯಲ್ಲಿದ್ದಾರೆ ಎಂದೂ ತಿಳಿಸಿದ್ದಾರೆ.
ಸಂತ್ರಸ್ತರು ತೆಲಂಗಾಣದ ವಾರಂಗಲ್ ಮತ್ತು ಖಮ್ಮಂ ಜಿಲ್ಲೆಗಳಿಗೆ ಸೇರಿದವರು. ಅವರು ಕಾಂಪ್ಲೆಕ್ಸ್‌ನಲ್ಲಿ ಕಚೇರಿ ಹೊಂದಿದ್ದ ಮಾರ್ಕೆಟಿಂಗ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಲವಾರು ಕಚೇರಿಗಳನ್ನು
ಹೊಂದಿರುವ ಸಂಕೀರ್ಣದಲ್ಲಿ ರಾತ್ರಿ 7.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು.
ಎಂಟು ಅಂತಸ್ತಿನ ಕಟ್ಟಡದ ಒಂದು ಮಹಡಿಯಿಂದ ಮೊದಲು ದೊಡ್ಡ ಜ್ವಾಲೆಗಳು ಹೊರಬಂದಿದ್ದರಿಂದ ಬೆಂಕಿಯನ್ನು ನಂದಿಸಲು 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಯಾರಾದರೂ ಇನ್ನೂ ಒಳಗೆ ಸಿಲುಕಿಕೊಂಡಿದ್ದಾರ ಎಂದು ನೋಡಲು ರಕ್ಷಣಾ ಸಿಬ್ಬಂದಿ ಪ್ರದೇಶವನ್ನು ಶೋಧಿಸುತ್ತಿದ್ದೆ ಎಂದು ಅವರು ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.


Share