ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

24
Share

ತೆಲಂಗಾಣದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರೇವಂತ ರೆಡ್ಡಿ ಅವರು ಇಂದು ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ 11 ಜನ ಶಾಸಕರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವ ಜಾರ್ಜ್ ಉಪಸ್ಥಿತರಿದ್ದರು.
ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಹೈದರಾಬಾದಿನ ಎಲ್ ಬಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ರಾಜ್ಯಪಾಲೆ ಸೌಂದರ ರಾಜನ್ ಪ್ರಮಾಣ ವಚನ ಭೋದಿಸಿದರು.


Share