ದಸರಾ-ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Share

 

ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಅರ್ಜಿ ಆಹ್ವಾನ
ಮೈಸೂರು.ಸೆ.13):- ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಉಪ ಸಮಿತಿಯಿಂದ ಅಕ್ಟೋಬರ್ 15 ರಿಂದ 23 ರವರೆಗೆ ವಿವಿಧ ಕಲಾ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರ ವೇದಿಕೆಗಳಲ್ಲಿ ಆಯೋಜಿಸಲಿದ್ದು, ಕಲಾವಿದರು/ಕಲಾ ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಸೆಪ್ಟೆಂಬರ್ 13 ರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ 0821-2513225 ಗೆ ಸಂಪರ್ಕಿಸಬಹುದು ಎಂದು ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ಉಪ ಸಮಿತಿ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಸರಾ ವಸ್ತುಪ್ರದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಅರ್ಜಿ ಆಹ್ವಾನ
ಮೈಸೂರು.ಸೆ.13- ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅಕ್ಟೋಬರ್ 15 ರಿಂದ 2024 ರ ಜನವರಿ 12 ರವರೆಗೆ 90 ದಿನಗಳ ದಸರಾ ವಸ್ತುಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ಸಂಬAಧ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಪ್ರತಿದಿನ ಸಂಜೆ 6:30 ರಿಂದ 9:30 ಗಂಟೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಆಸಕ್ತ ಕಲಾವಿದರು/ಸಂಘ ಸಂಸ್ಥೆಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ ಅರ್ಜಿಯನ್ನು WWW.Keaonline.in     ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಈ ಹಿಂದೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಬಗೆಗೆ ದೃಢೀರಕಣ ಪತ್ರಗಳು, ಭಾವಚಿತ್ರ ಮತ್ತು ಸಿ.ಡಿ.ಯೊಂದಿಗೆ ಸೆ.25 ರ ಸಂಜೆ 4.30 ರೊಳಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರವನ್ನು ಕಛೇರಿ ವೇಳೆಯಲ್ಲಿ ಹಾಗೂ ದೂ.ಸಂ: 0821- 2523626 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share