ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ- ಸಿದ್ದರಾಮಯ್ಯ

 

*ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ*

*ಇಂಡಿಯಾ ಒಪ್ಪಿತ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಸೆಪ್ಟೆಂಬರ್ 05: ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ವಿಧಾನ ಸೌಧದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು.