- *DC ಮತ್ತು CEO ಗಳ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟಂತೆ ಸಿಎಂ ನೀಡಿದ ಸೂಚನೆಗಳು…
*ನಗರ ಸ್ಥಳೀಯ ಸಂಸ್ಥೆಗಳ 1200 ವಾರ್ಡುಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಿಗೆ 27 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವೆಡೆ ಬೋರ್‌ವೆಲ್‌ಗಳನ್ನು ಕೊರೆಯಲು, ದುರಸ್ತಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು*
*ಚರಂಡಿ ನೀರಿನ ಪೈಪ್ ಲೈನ್ , ಕುಡಿಯುವ ನೀರಿನ ಪೈಪ್ ಲೈನ್ ನೊಂದಿಗೆ ಸೇರುವ ಕಡೆಗಳಲ್ಲಿ ಪೈಪ್ ಲೈನ್ ಸ್ಥಳಾಂತರ ಗೊಳ್ಳಬೇಕು. ಕಾಂಕ್ರೀಟ್ ರಸ್ತೆಗಳನ್ನು ಹಾಕುವ ಸಂದರ್ಭದಲ್ಲಿ ಯುಜಿಡಿ ಲೈನ್ ಹಾಗೂ ನೀರಿನ ಲೈನ್ ಗಳನ್ನು ಹಾಕುವ ಮುನ್ನ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕೆಂದು*
*ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬೆಳವಣಿಗೆಯಲ್ಲಿ ಇಳಿಕೆಯಾಗಿದೆ. ಕೆಲವು ಜಿಲ್ಲೆಯಲ್ಲಿ ಬೆಳವಣಿಗೆಯ ಪ್ರಮಾಣ ಶೇ5 ಕ್ಕಿಂತ ಕಡಿಮೆ ಇದೆ. ಇದನ್ನು ಸುಧಾರಿಸಲು ಕ್ರಮ ವಹಿಸಬೇಕು*
*ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಯನ್ನು ಯಾರೂ ಉಳಿಸಿಕೊಳ್ಳುವುದಿಲ್ಲ. ಕಟ್ಟದಿದ್ದವರಿಗೆ ನೋಟೀಸು ಕೊಟ್ಟು ಕಟ್ಟಲು ಕಾಲಮಿತಿ ನಿಗದಿ ಮಾಡಿಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರಿಗೆ ತೆರಿಗೆ ವಸೂಲು ಮಾಡುವಂತೆ ಸೂಚಿಸಿ ಪತ್ರ ಬರೆಯಲು ಮುಖ್ಯಮಂತ್ರಿಗಳು ಸೂಚಿಸಿದರು*