ನಜರ್ಬಾದ್ ಪೊಲೀಸ್ ಸಿಬ್ಬಂದಿಗಳಿಗೆ ಕರೋನಾ ಮಹಾಮಾರಿಯ ಆತಂಕ!!

ಮೈಸೂರು ನಜರ್ ಬಾದ್ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಇದೀಗ ಕೊರೋನಾ ಆತಂಕ ಶುರುವಾಗಿದೆ.
ನಜರ್ ಬಾದ್ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಕಾನ್ಸಟೇಬಲ್ ಓರ್ವರಲ್ಲಿ ಇಂದು ಬರುವ ಹೆಲ್ತ್ ಬುಲೆಟಿನ್ ನಲ್ಲಿ ಕೊರೋನಾ ಪಾಸಿಟಿವ್ ಬರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಇವರು ಠಾಣೆಯೆಲ್ಲ ತಿರುಗಾಡಿದ್ದರು. ಆದರೆ ಇದುವರೆಗೂ ಠಾಣೆಯನ್ನು ಸ್ಯಾನಿಟೈಸ್ ಮಾಡುವುದಾಗಲೀ, ಅಥವಾ ಠಾಣೆಯನ್ನು ಸೀಲ್ ಡೌನ್ ಮಾಡುವುದಕ್ಕಾಗಲಿ ಮೇಲಧಿಕಾರಿಗಳು ಹೋಗದೆ ಇರುವುದು ಅಲ್ಲಿನ ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿದೆ, ಪಾಸಿಟಿವ್ ಬರಲಿದೆ ಎನ್ನುವುದು ತಿಳಿಯುತ್ತಿದ್ದಂತೆ ಬೇರೆ ಠಾಣೆಗಳಲ್ಲಿ ಮೇಲಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಆದರೆ ಇಲ್ಲಿ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಅಲ್ಲಿನ ಪೊಲೀಸ್ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದೆ ಎನ್ನಲಾಗಿದೆ.