ನಟ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಸೋಂಕು ದೃಡ ಹಾಗೂ ಪತ್ನಿ ಐಶ್ವರ್ಯ ರೈ ಬಚ್ಚನ್, ತಾಯಿ ಜಯಬಚ್ಚನ್ ಅವರಿಗೆ ನೆಗೆಟಿವ್

634
Share

ನಿನ್ನೆಯಷ್ಟೇ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಇದರ
ಬೆನ್ನಲ್ಲೇ ಈಗ ಅವರ ಕುಟುಂಬದ ಮತ್ತೊಬ್ಬ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಭಿಷೇಕ್ ಬಚ್ಚನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಹೇಳಿಕೊಂಡಿದ್ದಾರೆ. ಪತ್ನಿ ಐಶ್ವರ್ಯಾ ಬಚ್ಚನ್ ಹಾಗೂ ತಾಯಿ ಜಯಬಚ್ಚನ್ ಅವರ ವರದಿಗಳು ನೆಗೆಟಿವ್ ಬಂದಿದೆ.
ಇದೇ ವೇಳೆ ತಮ್ಮನ್ನು ಸಂಪರ್ಕಿಸಿದ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಪಡುವಂತೆ ಅವರು ಮನವಿ ಮಾಡಿದ್ದಾರೆ.


Share