ನಟ ಚೇತನ್ ಬಂಧನ : ಧಾರ್ಮಿಕ ಭಾವನೆಗೆ ಧಕ್ಕೆ

Share

ಬೆಂಗಳೂರು: ನಟ ಚೇತನ್ ರವರು ಅವಹೇಳನಕಾರಿ ಟ್ವಿಟ್ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಶೇಷಾದ್ರಿಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ.
‘ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವಿಟ್ ಮಾಡಿದ್ದರು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
‘ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಚೇತನ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಎದುರು ಹಾಜರುಪಡಿಸಲು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದೇವೆ’ ಎಂದಿದ್ದಾರೆ.

Share