ನಡ್ಡಾ ಜೊತೆ ಚರ್ಚಿಸುವಂತೆ : ಬಿ ಎಸ್ವೈಗೆ ಪ್ರಧಾನಿ ಸೂಚನೆ

Share

ದೆಹಲಿ ರಾಜ್ಯದ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿರುವುದಾಗಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಜ್ಯದ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರಧಾನ ಸುಮಾರು ಅರ್ಧಗಂಟೆ ಚರ್ಚಿಸಿದರು ಎಂದು ಹೇಳಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ಜೊತೆ ಚರ್ಚಿಸಿರುವುದಾಗಿ ಹೇಳಿದ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಧಾನಿ ಯಾವ ಪ್ರಸ್ತಾಪ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಧಾನಿ ಭೇಟಿಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಪುತ್ರ ವಿಜಯೇಂದ್ರ ಅವರ ಬಗ್ಗೆ ಪಿತೂರಿ ನಡೆಸಲಾಗುತ್ತಿದೆ ಎಂದ ಅವರು ರಾಜ್ಯ ಸರ್ಕಾರದ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Share