ನಾಟು ನಾಟು ಹಾಡಿಗೆ ಕ್ರಿಕೇಟ್ ಮೈದಾನದಲ್ಲಿ ಹೆಜ್ಜೆ ಹಾಕಿದ ವಿರಾಟ್ ಕೊಹ್ಲಿ : ವೀಕ್ಷಿಸಿ

Share

 

ಭಾರತ vs ಆಸ್ಟ್ರೇಲಿಯಾ ಮೊದಲ ODI ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಶುಕ್ರವಾರ ವೈರಲ್ ‘ನಾಟು ನಾಟು’ ಹಾಡಿಗೆ ನೃತ್ಯ ಮಾಡಿದ್ದು ಅಂತರ್ಜಾಲದಲ್ಲಿ ಬಿರುಗಾಳಿಯಂತೆ ಹರಡಿದೆ.
ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಟದ ಮೊದಲ ಇನ್ನಿಂಗ್ಸ್‌ನಲ್ಲಿ ಅವರು ಆಸ್ಕರ್ ವಿಜೇತ ಹಾಡಿನ ಮುಖ್ಯ ಹೆಜ್ಜೆಯನ್ನು ಹಾಕಿರುವುದನ್ನು ಕಾಣಬಹುದು. ಈ ವಿಡಿಯೋವನ್ನು RRR ಚಿತ್ರದ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


Share