ನಾಳೆಯಿಂದ ಬಂಡೀಪುರ, ನಾಗರಹೊಳೆ ಬಂದ್, ಡಿಸಿ ಆದೇಶ

ಮೈಸೂರು
ನಾಳೆಯಿಂದ H.D.ಕೋಟೆ ತಾಲೂಕಿನಲ್ಲಿ ಮುಂದಿನ ಆದೇಶದವರೆಗೆ ರಾಜ್ಯ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಪ್ರವೇಷ ನಿರ್ಬಂಧಿಸಲಾಗಿದೆ.
ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶದಿಂದ ಬರುವ ಪ್ರವಾಸಿಗರಿಗೆ ಹೋಟೆಲ್, ವಸತಿಗೃಹ ಇತ್ಯಾದಿಗಳಲ್ಲಿ ಸೌಕರ್ಯ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಆನ್ಲೈನ್ನಲ್ಲಿ ಬುಕಿಂಗ್ ಮಾಡಿಕೊಳ್ಳಬಾರದು ಒಂದು ವೇಳೆ ಮಾಡಿದ್ದರೆ , ವಾಪಸ್ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೆಚ್ ಡಿ ಕೋಟೆ ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಬರುವ ನಾಗರಹೊಳೆ-ಬಂಡೀಪುರಕ್ಕೆ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.