ನಾಳೆ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಅಂಗವಾಗಿ ಗೋಪೂಜೆ

Share

 

ನಾಳೆ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಅಂಗವಾಗಿ ಗೋಪೂಜೆ

ಮೈಸೂರು: ಕೃಷ್ಣರಾಜ ಯುವ ಬಳಗ ವತಿಯಿಂದ ನಡೆದಾಡುವ ದೇವರು ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಅಂಗವಾಗಿ ಗೋಪೂಜೆ ವನ್ನು ನಾಳೆ ಏಪ್ರಿಲ್ 1 ರಂದು ನಂಜುಮಳಿಗೆ ಸಮೀಪ ಇರುವ ಮಹದೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದೆ ಎಂದು ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ ತಿಳಿಸಿದ್ದಾರೆ,
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡಿಕೆರೆ ಗೋಪಾಲ್, ಹೋಟೆಲ್ ಮಲಿಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ನಗರ ಪಾಲಿಕಾ ಸದಸ್ಯರಾದ ಮ ವಿ ರಾಮಪ್ರಸಾದ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ,ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪಾಯಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾನಂದೀಶ್,
ಜೀವದ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಗೌರವಾಧ್ಯಕ್ಷ ಮುಳ್ಳೂರು ಗುರುಪ್ರಸಾದ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಪೂರ್ವ ಸುರೇಶ್, ರಾಕೇಶ್ ಭಟ್ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ


Share