ನೂತನ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯಿದೆ ರೂಪುಗೊಳ್ಳುತ್ತಿದೆ ಶಿಕ್ಷಣ ಸಚಿವ

389
Share

ಬೆಂಗಳೂರು, ಮೇ 26 ( ಕರ್ನಾಟಕ ವಾರ್ತೆ )
ನೂತನ ಶಿಕ್ಷಕರ ವರ್ಗಾವಣಾ ನಿಯಂತ್ರಣಾ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ. ಹಾಗಾಗಿ ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಹಾಗೆಯೇ ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನುಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.


Share